ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಬೆಳ್ತಂಗಡಿ ಮೂಲದ ವಿಟ್ಲದ ಕಾಲೇಜೊಂದರ ವಿದ್ಯಾರ್ಥಿಯೋರ್ವರು ಮೃತಪಟ್ಟ ಘಟನೆ ಮಂಗಳೂರಿನ ಅರ್ಕುಳದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕು ದೇಲಂತಬೆಟ್ಟು ನಿವಾಸಿ ಶೇಕರರವರ ಪುತ್ರ ಪ್ರವಿತ್ ಕುಮಾರ್(22 ವ.)ಮೃತ ದುರ್ದೈವಿ, ಪ್ರವಿತ್ ರವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ
ಮಂಗಳೂರಿನ ಆರ್ಕುಳ ಸಮೀಪ ಅವರು ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿತ್ತು. ಈ ವೇಳೆ ಆ ದಾರಿಯಾಗಿ ಬಂದ ಲಾರಿಯೊಂದು ಅವರ ಮೇಲೆ ಸಂಚರಿಸಿದೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟರು. ಪ್ರವಿತ್ ರವರು ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿ ಯಾಗಿದ್ದು, ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ.