ಕಾಣಿಯೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಲೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ ಹಾಗೂ ಗರ್ಭನ್ಯಾಸ ಮತ್ತು ನಿಧಿ ಸಮರ್ಪಣೆ ಕಾರ್ಯಕ್ರಮವು ಜ 2ರಂದು ಸಂಜೆ ನಡೆಯಲಿದೆ.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನ ನಡೆಯಲಿದ್ದು, ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ದೇವಸ್ಥಾನದಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.