ಅಧ್ಯಕ್ಷರಾಗಿ ಜಯಕುಮಾರ್ ಕೆ, ಉಪಾಧ್ಯಕ್ಷರಾಗಿ ಸುನೀಲ್ ಕುಮಾರ್ ಬಿ.ಯು.
ಪುತ್ತೂರು: ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ ಮಂಗಳೂರು ವಿಭಾಗ, ಮಂಗಳೂರು ಇದರ 2025ನೇ ಸಾಲಿನ ಗೌರವಾಧ್ಯಕ್ಷರಾಗಿ ಬಳ್ಪ ಉಪವಲಯ ಅರಣ್ಯಾಧಿಕಾರಿ ಸಂತೋಷ್ ಕೆ., ಅಧ್ಯಕ್ಷರಾಗಿ ಕುಂತೂರು ಉಪವಲಯ ಅರಣ್ಯಾಧಿಕಾರಿ ಜಯಕುಮಾರ್ ಕೆ., ಹಾಗೂ ಉಪಾಧ್ಯಕ್ಷರಾಗಿ ನೆಲ್ಯಾಡಿ ಉಪವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್ ಬಿ.ಯು.ಆಯ್ಕೆಗೊಂಡರು.
ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಉಪವಲಯ ಅರಣ್ಯಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ಅಲೆಟ್ಟಿ ಉಪವಲಯ ಅರಣ್ಯಾಧಿಕಾರಿ ವೆಂಕಟೇಶ್ ಮೊಗೇರ, ಜೊತೆ ಕಾರ್ಯದರ್ಶಿಯಾಗಿ ಕನ್ಯಾನ ಉಪವಲಯ ಅರಣ್ಯಾಧಿಕಾರಿ ಮೆಹಬೂಬ ಸಾಬ್, ಖಜಾಂಜಿಯಾಗಿ ಬಂಟ್ವಾಳ ಉಪವಲಯ ಅರಣ್ಯಾಧಿಕಾರಿ ವಿಕಾಸ್ ಶೆಟ್ಟಿ ಹಾಗೂ ಮಹಿಳಾ ಪ್ರತಿನಿಧಿಯಾಗಿ ಆನೆಗುಂಡಿ ಉಪವಲಯ ಅರಣ್ಯಾಧಿಕಾರಿ ಸೌಮ್ಯ ಎ.ಜೆ. ಆಯ್ಕೆಗೊಂಡರು. ಸಮಿತಿಗೆ ಸದಸ್ಯರನ್ನು ನೇಮಕ ಮಾಡಲಾಯಿತು.