ಕಾವು :ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯ 27ನೇ ವಾರ್ಷಿಕೋತ್ಸವ ಕಾರ್ಯಕ್ರಮವು ನಾಳೆ ಸಂಜೆ 6.00 ಗಂಟೆಗೆ ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ಜನಾಬ್ ಅಬ್ದುಲ್ ಅಜೀಜ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠoದೂರು , ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಮಣಿಯಾಣಿ ಕುತ್ಯಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್ ಆರ್, ಶ್ರೀರಾಮಕೃಷ್ಣ ಪ್ರೌಢಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ, ತನ್ನ ಸ್ಕಾರ್ಪಿಯೋ ವಾಹನದಲ್ಲಿ 68 ರಾಷ್ಟ್ರಗಳನ್ನು ಸುತ್ತಿದ ಬುಶ್ರಾ ಸಂಸ್ಥೆಯ ಹಳೆಯ ವಿದ್ಯಾರ್ಥಿ ಸಿನಾನ್, ಏಷ್ಯನ್ ವುಡ್ ಅಂಡ್ ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ದರ್ಬೆ ಪುತ್ತೂರು ಇದರ ಮಾಲಕರಾದ ಜನಾಬ್ ಜಬ್ಬಾರ್, ಮ್ಯಾನೇಜರ್ ಹೆಚ್ ಆರ್ ಆಡಳಿತ ಮತ್ತು ಮಣಿಪಾಲ್ ಗ್ರೂಪ್ ಝೋನ್ ಟ್ರೈನರ್, ಜೆ ಸಿ ಐ ಇಂಡಿಯಾದ ಜನಾಬ್ ಕಲಂದರ್ ಶಾಫಿ, ಮತ್ತು ಮದಕ ಮುಳ್ಳೇರಿಯದ ಅಬ್ದುಲ್ ಖಾಸಿಫ್ ಸಿನಾಜ್ ಇವರುಗಳು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಶಾಲಾ ಆಡಳಿತ ಮಂಡಳಿ,ಮುಖ್ಯ ಗುರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.