ಜ.2:ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಹಾ ಚಂಡಿಕಾಯಾಗ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಮಹಾ ಚಂಡಿಕಾಯಾಗವು ಜ.2 ರಂದು ಜರಗಲಿದೆ.


ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಕಲಶ ಪೂಜೆ, ಪೂರ್ವಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ನಾಗದೇವರಲ್ಲಿ ತಂಬಿಲ ಸೇವೆ, ದೈವಗಳಿಗೆ ತಂಬಿಲ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂರ್ಪಣೆ ನಡೆಯಲಿದೆ.

ಅದೇ ದಿನ ರವಿವಾರ ಬೆಳಿಗ್ಗೆ ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತದವರೆಗೆ ಅರ್ಧ ಏಕಾಹ ಭಜನೆ ಹಾಗೂ ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನೆರವೇರಲಿದೆ.

ಭಕ್ತಾಧಿಗಳು ಈ ಪುಣ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಶ್ರೀ ದೇವಿಯ ಪ್ರಸಾದವನ್ನು ಸ್ವೀಕರಿಸಿ ಶ್ರೀ ಚಾಮುಂಡೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಅಧ್ಯಕ್ಷ ರಾಮ ಶೆಟ್ಟಿ, ಲೆಕ್ಕ ಪರಿಶೋಧಕ ಬಿ.ವಿಶ್ವನಾಥ ರೈ ಮಿಶನ್‌ಮೂಲೆ, ಕಾರ್ಯದರ್ಶಿ ಕೆ.ಬಿ ಶೇಖರ್, ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಕೆ, ಸತೀಶ್ ಎಂ, ಜೊತೆ ಕಾರ್ಯದರ್ಶಿಗಳಾದ ಲಕ್ಷ್ಮಣ ಶೆಟ್ಟಿ, ಸಂತೋಷ್ ರೈ, ಸುಂದರ ಕೆ, ಕೋಶಾಧಿಕಾರಿ ಮೋಹನ್ ಕುಮಾರ್ ಡಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here