ಪುತ್ತೂರು: ಪುತ್ತೂರು ನೆ.ನಗರದ ಅಶ್ವಿನಿ ಕಾಂಪ್ಲೆಕ್ಸ್ ನಲ್ಲಿ ಕಳೆದ 15ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಗಣೇಶ್ ಮೆಡಿಕಲ್ಸ್ ಮತ್ತು ಜನರಲ್ ಸ್ಟೋರ್ಸ್ ಜ.3ರಂದು ಸಂಪ್ಯದ ಕಾವೇರಿ ಕಾಂಪ್ಲೆಕ್ಸ್ ನಲ್ಲಿ ಸ್ಥಳಾಂತರಗೊಂಡು ಶುಭಾರಂಭಗೊಳ್ಳಲಿದೆ.
ಬೆಳಿಗ್ಗೆ ರಾಮ ಪ್ರಸಾದ್ ಕಲ್ಲರ್ಪೆಯವರ ಉಪಸ್ಥಿತಿಯಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಗಣ್ಯರ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲನೆಯೊಂದಿಗೆ ಸಂಸ್ಥೆ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕ ಶಂಕರನಾರಾಯಣ ಭಟ್ ಎಸ್ ಮಲಾರ್ ನೆಕ್ಕರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.