ಕಡೇಶಿವಾಲಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಶಾಲಾ ವಾರ್ಷಿಕೋತ್ಸವ

0

ವಿಟ್ಲ: ಕಡೇಶಿವಾಲಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವು ಜ.2ರಂದು ನಡೆಯಿತು.

ಕಡೇಶಿವಾಲಯ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲೋಕಾನಂದ ಎನ್. ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ,
ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಬೆಳಗಲು ಪೂರಕವಾದ ಶಿಕ್ಷಣ ವಸತಿ ಶಾಲೆಯಲ್ಲಿ ದೊರೆಯುತ್ತಿರುವುದರಿಂದ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಉತ್ತಮ ವೇದಿಕೆಯಾಗಿದೆ ಎಂದರು.

ಕಡೇಶಿವಾಲಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುರೇಶ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ವಿಶೇಷ ಸಂಪನ್ಮೂಲ ಅಧಿಕಾರಿ ಸುರೇಖಾ ಯಾಳವಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು‌.

ವಸತಿ ಶಾಲಾ ಮೇಲ್ವಿಚಾರಕಿ ಭವ್ಯ ಪಿ. ಸ್ವಾಗತಿಸಿ, ಶಿಕ್ಷಕಿ ವನಿತಾ ಯಂ. ವಂದಿಸಿದರು. ಶಿಕ್ಷಕಿಯರಾದ ಧನಲಕ್ಷ್ಮೀ ಕೆ., ಶ್ವೇತಾ, ವಿದ್ಯಾಕುಮಾರಿ ಎ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜಯಲಕ್ಷ್ಮೀ ಡಿ. ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಾಲಾ ಶಿಕ್ಷಕಿ ಯಶೋದ ಎಸ್. ಶೈಕ್ಷಣಿಕ ವರ್ಷದ ವರದಿಯನ್ನು ವಾಚಿಸಿದರು. ಬೋಧಕೇತರ ಸಿಬ್ಬಂದಿಗಳಾದ ಸವಿತ, ಶೈಲಜಾ ಬಿ., ಶಾರದಾ, ಉಷಾ ಟಿ., ದೇವಕಿ, ಪ್ರೀತಿ ಯಂ. ಸಹಕರಿಸಿದರು. ಬಳಿಕ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

LEAVE A REPLY

Please enter your comment!
Please enter your name here