ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆ, ಪ್ರೀತಿಸುವ ನೆಪದಲ್ಲಿ ವಿಶ್ವಾಸ ಸಂಪಾದಿಸಿ ಬಳಿಕ ಬಾಡಿಗೆ ರೂಂ ಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿ ಯುವಕನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿ. ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕವಾಗಿ ಬಳಸಿಕೊಂಡಿದ್ದಲ್ಲದೆ ಖಾಸಗಿ ಕ್ಷಣದ ನಗ್ನ ವೀಡಿಯೋಗಳನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕಡಬ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸುಳ್ಯದಲ್ಲಿದ್ದ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.