ನಿಡ್ಪಳ್ಳಿ :ಪಾಣಾಜೆ ಸುಬೋಧ ಪ್ರೌಢಶಾಲೆಯ ವಾರ್ಷಿಕ ಕ್ರೀಡೋತ್ಸವವು ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ಟರ ಅಧ್ಯಕ್ಷತೆಯಲ್ಲಿ ಜ. 2 ರಂದು ಜರಗಿತು.
ಆರ್ಲಪದವು ಸ್ನೇಹ ಟೆಕ್ಸ್ ಟೈಲ್ ಮಾಲಕ ವರದರಾಯ ನಾಯಕ್ ಕ್ರೀಡೋತ್ಸವವನ್ನು ಉದ್ಘಾಟಿಸಿ, ಧ್ವಜಾರೋಹಣಗೈದು ಕ್ರೀಡೆಯ ಮಹತ್ವವನ್ನು ವಿವರಿಸಿ ಶುಭ ಹಾರೈಸಿದರು.
ಶಾಲಾ ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಎಂಟನೇ ತರಗತಿಯ ವಿದ್ಯಾರ್ಥಿನಿ ದೀಪಿಕಾ ಪ್ರಾರ್ಥಿಸಿದರು. ಶಾಲಾ ನಾಯಕ ಹತ್ತನೇ ತರಗತಿಯ ಜಿತೇಶ್ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ಹಾಗೂ ಏರೋಬಿಕ್ಸ್ ಪ್ರದರ್ಶಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್ ಪಿ ವಂದಿಸಿದರು. ಸಹ ಶಿಕ್ಷಕಿ ನಿರ್ಮಲ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕಡಂದೇಲು ಈಶ್ವರ ಭಟ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಆರ್ಲಪದವು ಹಾಗೂ ಉಪಾಧ್ಯಕ್ಷೆ ಜಯಶ್ರೀ ದೇವಸ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಹಿರಿಯ ವಿದ್ಯಾರ್ಥಿಗಳು ಸಹಕರಿಸಿದರು