ಜ. 4 : ಕುಮಾರಮಂಗಲ ಶಾಲೆಯಲ್ಲಿ ವಾರ್ಷಿಕ ಕಲೋತ್ಸವ ಸಂಭ್ರಮ

0

ಪುತ್ತೂರು: ಕುಮಾರಮಂಗಲ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಜ. 4 ರಂದು ವಾರ್ಷಿಕ ಕಲೋತ್ಸವ ಸಂಭ್ರಮ ಕಾರ್ಯಕ್ರಮ ಜರಗಲಿದೆ.

ಪೂರ್ವಾಹ್ನ ಧ್ವಜಾರೋಹಣ ನಡೆಯಲಿದೆ. ಅಪರಾಹ್ನ 3 ರಿಂದ ಸಭಾ ಕಾರ್ಯಕ್ರಮ ಜರಗಲಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ಸವಣೂರು ಗ್ರಾ.ಪಂ, ಅಧ್ಯಕ್ಷೆ ಸುಂದರಿ ಅಧ್ಯಕ್ಷತೆ ವಹಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸಹಿತ ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ. ನಿವೃತ್ತ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ರವರಿಂದ ಪ್ರಚಲಿತ ಶಿಕ್ಷಣ ವ್ಯವಸ್ಥೆ ಮತ್ತು ಮೌಲ್ಯಗಳು ವಿಚಾರದಲ್ಲಿ ಉಪನ್ಯಾಸ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನೆಗಳು, ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಶಾಲಾ ಮುಖ್ಯ ಗುರು ಸಂತೋಷ್ ಎನ್ ಟಿ , ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಕೆ. ಸವಣೂರು ಹಾಗೂ ಎಸ್ ಡಿಎಂಸಿ ಅಧ್ಯಕ್ಷ ಸುಂದರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here