ಪುತ್ತೂರು: ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ, ಪುತ್ತೂರು ತಾಲೂಕು ಘಟಕ ಹಾಗೂ ಯುವ ವೇದಿಕೆ ಪುತ್ತೂರು ತಾಲೂಕು ಘಟಕ ಇದರ ಸಹಯೋಗದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಜ.5 ರಂದು ಪುತ್ತೂರು ಜೈನ ಭವನದಲ್ಲಿ ಬೆಳಿಗ್ಗೆಯಿಂದ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಹಾ ಪುತ್ತೂರು ತಾಲೂಕು ಘಟಕ ಹಾಗೂ ಯುವ ವೇದಿಕೆ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.