ನೆಲ್ಯಾಡಿ: ಆಲಂತಾಯ ಗ್ರಾಮದ ಶ್ರೀ ಕ್ಷೇತ್ರ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಜ.4 ಮತ್ತು ಜ.5ರಂದು ಪಂಚಮಿ ಕಿರುಷಷ್ಠಿ ಉತ್ಸವವು ವೇದಮೂರ್ತಿ ಉಚ್ಚಿಲತ್ತಾಯ ಕೆ.ಯು.ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಜ.4ರಂದು ಸಂಜೆ 6ಕ್ಕೆ ಕ್ಷೇತ್ರಕ್ಕೆ ತಂತ್ರಿಗಳು ಆಗಮಿಸಲಿದ್ದಾರೆ. ಸಂಜೆ 6 ರಿಂದ ರಾತ್ರಿ 8ರ ತನಕ ಶ್ರೀ ಷಣ್ಮುಖ ಸಂಗೀತ ಸಂಗಮ ಇವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8ಕ್ಕೆ ರಂಗಪೂಜೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9ಕ್ಕೆ ದೇವರ ಬಲಿ ಹೊರಡುವುದು, ಕಟ್ಟೆಪೂಜೆ, ನೃತ್ಯ ಬಲಿ ನಡೆಯಲಿದೆ. ಜ.5ರಂದು ಬೆಳಿಗ್ಗೆ 7ರಿಂದ ಗಣಪತಿ ಹೋಮ, ಕಲಶಪೂಜೆ, ದೇವರ ಬಲಿ ಹೊರಡುವುದು, ದರ್ಶನ ಬಲಿ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಬಟ್ಟಲು ಕಾಣಿಕೆ, ಮಧ್ಯಾಹ್ನ 12ಕ್ಕೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 1.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.