ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ: ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸಭಾಭವನ ಉದ್ಘಾಟನೆ

0

ಪುತ್ತೂರು:ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹಸಂಸ್ಥೆಗಳ ಸಹಯೋಗದೊಂದಿಗೆ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮ ಜ.4ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುತ್ತಿದೆ.


ಕಾರ್ಯಕ್ರಮದ ಸಲುವಾಗಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಬೆಳಿಗ್ಗೆ ಪುತ್ತೂರಿಗೆ ಆಗಮಿಸಿದ ಅವರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ನ ದಶಮಾನೋತ್ಸವದ ಸವಿನೆನಪಿಗಾಗಿ, ನೆಲ್ಲಿಕಟ್ಟೆಯಲ್ಲಿರುವ ಟ್ರಸ್ಟ್‌ನ ಕಚೇರಿಯ 2ನೇ ಮಹಡಿಯಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಸಭಾಭವನವನ್ನು ಸ್ವಾಮೀಜಿಗಳು, ಗಣ್ಯರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿದರು.

LEAVE A REPLY

Please enter your comment!
Please enter your name here