ಪುತ್ತೂರು: ಸಮುದಾಯದಲ್ಲಿ ಅತಿ ಹೆಚ್ಚು ಇಷ್ಟಪಟ್ಟು ಆಗುತ್ತಿರುವ ಕಾರ್ಯಕ್ರಮ ಅದು ಪುತ್ತೂರಿನಲ್ಲಿ ಕಂಡಿದ್ದೇನೆ ಎಂದು ಶ್ರೀ ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಒಕ್ಕಲಿಗ ಗೌಡ ಸೇವಾ ಸಂಘ ಇದರ ವತಿಯಿಂದ ಸಹ ಸಂಸ್ಥೆಗಳ ಸಹಯೋಗದೊಂದಿಗೆ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಇದರ ದಶಮಾನೋತ್ಸವ ಸಂಭ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
ನಿಮ್ಮ ಪ್ರೀತಿಗಾಗಿ ನಾನಿವತ್ತು ಬಂದಿದ್ದೇನೆ. ಯಾಕೆಂದರೆ ಪುತ್ತೂರಿನ ಪ್ರಾರಂಭದ ದಿನಗಳಲ್ಲಿ ಪ್ರವಾಸ ಮಾಡಿರುವುದು ಎಷ್ಟು ಸಂತೋಷ ಆಗಿದೆ ಎಂದರೆ ಗ್ರಾಮ ವಾಸ್ತವ್ಯ ಬೇಟಿ ಕಾರ್ಯಕ್ರಮ ನಮ್ಮ ರಾಜ್ಯದ ಬೇರೆ ಬೇರೆ ಶಾಖಾ ಮಠಗಳಿಗೆ ಆದರ್ಶಪ್ರಾಯವಾಗಿದೆ ಎಂದರು.
ಅಖಿಲ ಕರ್ನಾಟಕ ಮಹಿಳಾ ಒಕ್ಕಲಿಗರ ಘಟಕದ ರಾಜ್ಯಾಧ್ಯಕ್ಷೆ ಡಾ.ಶಾಂತ ಸುರೇಂದ್ರ ಗೌಡ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಪ್ರಧಾನ ಕಾರ್ಯದರ್ಶಿ ದಯಾನಂದ ಕೆ ಎಸ್, ನ್ಯಾಯವಾದಿ ಮೋಹನ್ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಎ ವಿ ನಾರಾಯಣ, ಅಧ್ಯಕ್ಷ ಡಿ ವಿ ಮನೋಹರ, ದಶಮಾನೋತ್ಸವ ಸಮಿತಿ ಅಧ್ತಕ್ಷ ಪಟೇಲ್ ಗೋಪಾಲಕೃಷ್ಣ ಗೌಡ ಚಾರ್ವಾಕ, ಗೌಡ ಮಹಿಳಾ ಸಂಘದ ಅಧ್ಯಕ್ಷ ವಾರಿಜ ಕೆ, ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ್, ಟ್ರಸ್ಟ್ ನ ಕಾರ್ಯದರ್ಶಿ ದಿವ್ಯಪ್ರಸಾದ್, ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಗೌಡ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.
ಇಚಿಲಂಪಾಡಿ ಸ್ವಸಹಾಯ ಸಂಘದ ಸದಸ್ಯರು ಪ್ರಾರ್ಥಿಸಿದರು. ವಸಂತ ವೀರಮಂಗಲ ಮತ್ತು ಸೀತಾರಾಮ ಕೇವಳ ಕಾರ್ಯಕ್ರಮ ನಿರೂಪಿಸಿದರು.