ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ನರೇಗಾ ಯೋಜನೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಸುಮಾರು 5 ಲಕ್ಷ 20 ಸಾವಿರ ರೂಪಾಯಿ ವೆಚ್ಚದಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಿರ್ಮಿಸಿದ ಶೌಚಾಲಯದ ಕೀಯನ್ನು ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರು ಶಾಲಾ ಕಾರ್ಯಾಧ್ಯಕ್ಷ ರಕ್ಷಿತ್ ರೈ ಮುಗೇರುರವರಿಗೆ ಹಸ್ತಾಂತರಿಸಿದರು.
ಈ ಶೌಚಾಲಯವನ್ನು ಹುಡುಗರಿಗೆ, ಹುಡುಗಿಯರಿಗೆ ಹಾಗೂ ಶಿಕ್ಷಕರಿಗೆ ಅನುಕೂಲವಾಗುವಂತೆ ನಿರ್ಮಿಸಲಾಗಿದೆ. ಜ.4 ರಂದು ನಡೆದ ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ಕೀ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳರವರು, ಈಗಾಗಲೇ ಕುಂಬ್ರ ಕೆಪಿಎಸ್ ಶಾಲೆಗೆ ಪಂಚಾಯತ್‌ನಿಂದ ವಿವಿಧ ಅನುದಾನಗಳನ್ನು ಬಳಸಿಕೊಂಡು ಸುಮಾರು 20 ಲಕ್ಷಕ್ಕೂ ಅಧಿಕ ಅನುದಾನಗಳನ್ನು ನೀಡಿದ್ದೇವೆ. ಗ್ರಾಮದ ಎಲ್ಲಾ ಶಾಲೆಗಳಿಗಿಂತ ಹೆಚ್ಚು ಅನುದಾನವನ್ನು ಕೆಪಿಎಸ್‌ಗೆ ನೀಡಲಾಗಿದೆ ಎಂಬ ವಿಚಾರವನ್ನು ತಿಳಿಸಿ, ಸರಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಪಂಚಾಯತ್ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಸದಸ್ಯರುಗಳಾದ ವಿನೋದ್ ಶೆಟ್ಟಿ ಮುಡಾಲ, ಪುತ್ತೂರು ಜ್ಯೂನಿಯರ್ ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್‌ಕೌಶಲ್ ಶೆಟ್ಟಿ, ಒಕ್ಕಲಿಗ ಗೌಡ ಸಂಘದ ಕುಂಬ್ರ ವಲಯ ಅಧ್ಯಕ್ಷ ಸತೀಶ್, ಕೆಪಿಎಸ್ ಅಭಿವೃದ್ಧಿ ಸಮಿತಿ ಸದಸ್ಯ ರಝಾಕ್ ಪರ್ಪುಂಜ, ನಿವೃತ್ತ ಶಿಕ್ಷಕ ಸುಧಾಕರ ರೈ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಜಾತ ರೈ, ಅಂಗನವಾಡಿ ಶಿಕ್ಷಕಿ ಆಶಾಲತಾ ರೈ, ದಾನಿ, ಉದ್ಯಮಿ ಸುರೇಶ್ ಕುಮಾರ್ ತಿಂಗಳಾಡಿ, ಕೆಪಿಎಸ್ ಪ್ರೌಢ ಶಾಲಾ ವಿಭಾಗದ ಪ್ರಭಾರ ಪ್ರಾಂಶುಪಾಲರಾದ ಶರ್ಮಿಳ್ ಗ್ಲಾಡಿಯಸ್, ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯಗುರು ಜ್ಯೂಲಿಯಾನ ಮೊರಸ್, ಕಾಲೇಜು ವಿಭಾಗದ ಪ್ರಾಂಶುಪಾಲರಾದ ಮಮತಾ ಕೆ.ಎಸ್ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.