ನಿಡ್ಪಳ್ಳಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಮಂಜೂರುಗೊಂಡ 10 ಡೆಸ್ಕ್ ಮತ್ತು 10 ಬೆಂಚನ್ನು ಜ.2 ರಂದು ಶಾಲೆಗೆ ಹಸ್ತಾಂತರಿಸಲಾಯಿತು.
ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷೇತ್ರ ಧರ್ಮಸ್ಥಳದಿಂದ ಜ್ಞಾನ ದೀಪ ಕಾರ್ಯಕ್ರಮದಡಿಯಲ್ಲಿ ಡೆಸ್ಕ್ ಬೆಂಚ್ ಒದಗಿಸಿ ಕೊಟ್ಟದ್ದು ತುಂಬಾ ಸಂತೋಷವಾಗಿದೆ ಎಂದು ಹೇಳಿದರು. ಉದ್ಯಮಿ ವರದರಾಯ ನಾಯಕ್, ಕಡಂದೇಲು ಈಶ್ವರ ಭಟ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್. ಯಸ್ ಆರ್ಲಪದವು, ಒಕ್ಕೂಟದ ಅಧ್ಯಕ್ಷ ಐತ್ತಪ್ಪ ನಾಯ್ಕ, ಬೆಟ್ಟಂಪಾಡಿ ವಲಯದ ಮೇಲ್ವಿಚಾರಕ ಸೋಹನ್ ಗೌಡ, ಸೇವಾ ಪ್ರತಿನಿಧಿ ಜಯಶ್ರೀ, ಶಾಲಾ ಶಿಕ್ಷಕರು,ಮಕ್ಕಳು, ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ವಂದಿಸಿದರು.