ಪುತ್ತೂರು: ಕೋಡಿಂಬಾಡಿ ಗ್ರಾ.ಪಂ ಬಿಜೆಪಿ ಬೆಂಬಲಿತೆ ಸದಸ್ಯೆ ಉಷಾ ಲಕ್ಷ್ಮಣ ಪೂಜಾರಿ ಕೋರ್ಯ ಬೆಳ್ಳಿಪ್ಪಾಡಿಯವರು ಶಾಸಕ ಅಶೋಕ್ ಕುಮಾರ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು ಟಿ ತೌಸೀಫ್, ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಗೌಡ, ಉಸ್ತುವಾರಿಗಳಾದ ಪ್ರವೀಣ್ ಚಂದ್ರ ಆಳ್ವ, ಡಾ. ರಾಜಾರಾಂ ಕೆಬಿ, ಜಿಲ್ಲಾ ಪ್ರ.ಕಾರ್ಯದರ್ಶಿ ಮುರಳೀದರ್ ರೈ ಮಠಂತಬೆಟ್ಟಿ, ಭೂನ್ಯಾಯ ಮಂಡಳಿ ಸದಸ್ಯ ನಿರಂಜನ್ ರೈ ಮಠಂತಬೆಟ್ಟು, ಕೋಡಿಂಬಾಡಿ ಗ್ರಾಪಂ ಅಧ್ಯಕ್ಷೆ ಮಲ್ಲಿಕಾ ಅಶೋಕ್, ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ವಲಯ ಕಾರ್ಯದರ್ಶಿ ಯೋಗಿಶ್ ಸಾಮಾನಿ, ಕೋಡಿಂಬಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಗನ್ನಾಥ ರೈ ನಡುಮನೆ, ಗ್ರಾಪಂ ಸದಸ್ಯರುಗಳಾದ ಪೂರ್ಣಿಮಾ, ಗೀತಾ, ಉಷಾ,ಮತ್ತಿತರರು ಉಪಸ್ಥಿತರಿದ್ದರು.