ಪುತ್ತೂರು: ಸರಿಸುಮಾರು 386 ವರ್ಷಗಳ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕದ ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ವರ್ಷಾವಧಿ ನಡೆಸಿಕೊಂಡು ಬಂದಿರುವ ಶ್ರೀ ಕೊರಗಜ್ಜ ದೈವದ ನೇಮೋತ್ಸವವು ಜ.23 ರಿಂದ 25ರ ತನಕ ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಜ.5 ರಂದು ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ ಅಧ್ಯಕ್ಷತೆಯಲ್ಲಿ ಜರಗಿತು.
ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರು ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಶ್ರೀ ಕ್ಷೇತ್ರದಲ್ಲಿ ನೇಮೋತ್ಸವದ ಸಂದರ್ಭದಲ್ಲಿ ನಡೆಯಬೇಕಾಗಿದ್ದ ಕಾರ್ಯಾವಳಿಗಳ ಜವಾಬ್ದಾರಿಗಳನ್ನು ಹಂಚಿಸಲಾಯಿತು. ಶ್ರೀ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ್ ಮಣ್ಣಾಪು, ಶ್ರೀ ಕ್ಷೇತ್ರದ ದೈವದ ಪ್ರಧಾನ ಅರ್ಚಕರಾದ ಕುಂಡ ಮಣ್ಣಾಪು, ಅಣ್ಣು ಮಣ್ಣಾಪು, ಮಧ್ಯಸ್ಥ ಗಣೇಶ್ ಪೂಜಾರಿ ಕೆಮ್ಮಿಂಜೆ, ಸುಜೀರ್ ಶೆಟ್ಟಿ ನುಳಿಯಾಲು ಸಹಿತ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರದ ಉಪಾಧ್ಯಕ್ಷ ವಿಶ್ವನಾಥ ಪೂಜಾರಿ ಮೊಟ್ಟೆತ್ತಡ್ಕ ಸ್ವಾಗತಿಸಿ, ವಂದಿಸಿದರು.
ರಾಜ್ಯವ್ಯಾಪಿ ಶ್ರೀ ಕ್ಷೇತ್ರದ ಕಾರ್ಣಿಕ ಶಕ್ತಿ ಪಸರಿಸಿದೆ..
ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವ ಕಾರ್ಯಕ್ರಮಕ್ಕೆ ಜನಸಾಗರ ಹರಿದು ಬರುತ್ತಿರುವುದಕ್ಕೆ ಶ್ರೀ ಕ್ಷೇತ್ರದಲ್ಲಿ ನಡೆಯುವ ಕಾರಣಿಕ ಶಕ್ತಿಯೇ ಕಾರಣವಾಗಿದ್ದು ಇದು ರಾಜ್ಯವ್ಯಾಪಿ ಪಸರಿಸಿದೆ. ಹಲವು ವರ್ಷಗಳಿಂದ ಶ್ರೀ ಕ್ಷೇತ್ರದಲ್ಲಿ ನಡೆಯುವ ನೇಮೋತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರದ ಭಕ್ತರ ಪ್ರಾಮಾಣಿಕ ಸಹಕಾರದಿಂದ ಯಶಸ್ವಿಯಾಗಿ ನಡೆದು ಬಂದಿದೆ ಮಾತ್ರವಲ್ಲ ಪ್ರತಿ ತಿಂಗಳು ನಡೆಯುವ ಸಂಕ್ರಮಣ ದಿನದಂದು ನೂರಕ್ಕೂ ಮಿಕ್ಕಿ ಅಗೇಲು ಸೇವೆ ನಡೆಯುತ್ತಿರುವುದು ಶ್ರೀ ಕ್ಷೇತ್ರದ ಕಾರಣಿಕವಾಗಿದೆ. ಮುಂದಿನ ದಿನಗಳಲ್ಲಿ ಶ್ರೀ ಕ್ಷೇತ್ರದಲ್ಲಿ ನಡೆಯುವ ನೇಮೋತ್ಸವ ಕಾರ್ಯಕ್ರಮವು ಬಹಳ ಶಿಸ್ತುಬದ್ಧವಾಗಿ ನಡೆಯಲು ಸರ್ವರ ಸಹಕಾರ ಹಾಗೂ ಪ್ರೋತ್ಸಾಹವಿರಲಿ.
-ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಗೌರವಾಧ್ಯಕ್ಷರು, ಜೀರ್ಣೋದ್ಧಾರ ಸಮಿತಿ, ಶ್ರೀ ಕ್ಷೇತ್ರ ಮಣ್ಣಾಪು