ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ- ಭಾಗೀರಥಿ ಮುರುಳ್ಯ
ಪುತ್ತೂರು: ಸರಕಾರಿ ಶಾಲೆಯ ಬಗ್ಗೆ ಕೀಳರಿಮೆಯನ್ನು ಬಿಟ್ಟು ಬಿಡಿ. ಕನ್ನಡ ಮಾಧ್ಯಮದಲ್ಲಿ ಕಲಿತ ಮಕ್ಕಳು ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ. ಪರಿಪೂರ್ಣವಾದ ವ್ಯವಸ್ಥೆಗಳು ಸರಕಾರಿ ಶಾಲೆಯಲ್ಲಿ ಇದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅವರು ಜ.4 ರಂದು ಕುಮಾರಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕಲೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸವಣೂರು ಗ್ರಾ.ಪಂ, ಅಧ್ಯಕ್ಷೆ ಸುಂದರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ, ಸಂದರ್ಭೋಚಿತವಾಗಿ ಮಾತನಾಡಿದರು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು- ಬಿ.ವಿ.ಸೂರ್ಯನಾರಾಯಣ: ನಿವೃತ್ತ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣರವರು ಪ್ರಚಲಿತ ಶಿಕ್ಷಣ ವ್ಯವಸ್ಥೆ ಮತ್ತು ಮೌಲ್ಯಗಳು ವಿಷಯದಲ್ಲಿ ಮಾತನಾಡಿ, ಮಕ್ಕಳನ್ನು ಓದಿಸುವ ವೇಳೆ, ಪೋಷಕರು ಕೂಡ ಭಾಗಿಗಳಾಗಿ ಅವರ ಜೊತೆ ಇರಬೇಕು, ಪ್ರತಿ ನಿತ್ಯ ವಾರ್ತಾ ಪತ್ರಿಕೆ ಮತ್ತು ಪುಸ್ತಕವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.
ಸವಣೂರು ಗ್ರಾ.ಪಂ, ಉಪಾಧ್ಯಕ್ಷೆ ಜಯಶ್ರೀ ಕುಚ್ಚೆಜಾಲು, ಕ್ಷೇತ್ರ ಶಿಕ್ಷಣಾಽಕಾರಿ ಲೋಕೇಶ್ ಎಸ್.ಆರ್, ಸವಣೂರು ಕ್ಲಸ್ಟರ್ ಸಿಆರ್ಪಿ ಜಯಂತ್ ವೈ, ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಉನ್ನತ ಹಿ.ಪ್ರಾ.ಶಾಲೆಯ ಮುಖ್ಯಗುರು ನಿಂಗರಾಜು, ಪುತ್ತೂರು ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಕೃಷ್ಣಕುಮಾರ್ ರೈ ದೇವಸ್ಯ, ಸವಣೂರು ಗ್ರಾ.ಪಂ, ಸದಸ್ಯ ಅಬ್ದುಲ್ ರಜಾಕ್ ಕೆನರಾರವರು ಸಂದರ್ಭೋಚಿತವಾಗಿ ಮಾತನಾಡಿದರು.
ವೇದಿಕೆಯಲ್ಲಿ ಸವಣೂರು ಗ್ರಾ.ಪಂ, ಸದಸ್ಯರಾದ ಶೀನಪ್ಪ ಶೆಟ್ಟಿ ನೆಕ್ರಾಜೆ, ಗಿರಿಶಂಕರ್ ಸುಲಾಯ ದೇವಸ್ಯ , ಯಶೋಧ ನೂಜಾಜೆ, ರಪೀಕ್ ಎಂ. ಎ, ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ, ಮಾಜಿ ಸದಸ್ಯ ಸತೀಶ್ ಬಲ್ಯಾಯ, ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಮುಖ್ಯಕಾರ್ಯನಿರ್ವಹಣಾಽಕಾರಿ ಚಂದ್ರಶೇಖರ್ಪಿ, ನಿವೃತ್ತ ಶಿಕ್ಷಕ ಮೋನಪ್ಪ ನಾಯ್ಕ್ ಕೊಂಬಕೆರೆ, ಎಸ್ಡಿಎಂಸಿ ಅಧ್ಯಕ್ಷ ಸುಂದರ ಕೆ, ಶಾಲಾ ನಾಯಕಿ ರಶ್ಮಿ ಆರ್ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಸಂತೋಷ್ ಎನ್.ಟಿ ವರದಿ ವಾಚಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಕೆ.ಸವಣೂರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದತ್ತಿನಿಽ ವಿತರಣೆ ಮತ್ತು ಬಹುಮಾನ ವಿತರಣೆ ಹಾಗೂ ವಿವಿಧ ಸಾಧಕರಿಗೆ ಬಹುಮಾನ ವಿತರಣೆ ನಡೆಯಿತು.
ಮನವಿ ಸಲ್ಲಿಕೆ: ಕುಮಾರಮಂಗಲ ಶಾಲೆಯನ್ನು ವಸತಿಯುತ ಶಾಲೆಯಾಗಿ ಪರಿವರ್ತಿಸಬೇಕೆಂದು ಶಾಲಾ ಹಿರಿಯ ವಿದ್ಯಾರ್ಥಿ ಸಂಘದಿಂದ ಶಾಸಕಿ ಭಾಗೀರಥಿ ಮತ್ತು ಸವಣೂರು ಗ್ರಾ.ಪಂ, ಅಧ್ಯಕ್ಷೆ ಸುಂದರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಸರ್ವೆ ಸ.ಹಿ.ಪ್ರಾ.ಶಾಲೆ ಶಿಕ್ಷಕಿ ಜ್ಯೋತಿ ಸಿ.ಜಿ ಕಾರ್ಯಕ್ರಮ ನಿರೂಪಿಸಿದರು. ಆಖಿಲಾ ನೆಕ್ರಾಜೆ ಪ್ರಾರ್ಥಿಸಿದರು. ರಾಜೇಶ್ವರಿ ಕನ್ಯಾಮಂಗಲ ವಂದಿಸಿದರು. ಪೂರ್ವಾಹ್ನ ಜರಗಿದ ಸಮಾರಂಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಸುಂದರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಸವಣೂರು, ಎಸ್ಡಿಎಂಸಿ ಉಪಾಧ್ಯಕ್ಷೆ ಹೇಮಲತಾ, ಪ್ರಕಾಶ್ ಕುಮಾರ್ ಬಂಬಿಲಗುತ್ತು, ನಾಗರಾಜ್ ನಿಡ್ವಣ್ಣಾಯ, ಉಮೇಶ್ ಕುಮಾರಮಂಗಲ ಬೇರಿಕೆ, ವಿಜಯಕುಮಾರ್ ಕನ್ಯಾಮಂಗಲ, ನವೀನ್ ಶೆಟ್ಟಿ ನೂಜಾಜೆ, ಬಾಳಪ್ಪ ಪೂಜಾರಿ ಬಂಬಿಲದೋಳ, ಸೋಮನಾಥ ಕನ್ಯಾಮಂಗಲ, ರಾಮಕೃಷ್ಣ ವಿ.ಯು, ಕೊರಗಪ್ಪ ಗೌಡ, ಪುಟ್ಟಣ್ಣ ಬಂಬಿಲ ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಯಕ್ಷಗಾನ ಬಯಲಾಟ ನಡೆಯಿತು.
ವಸತಿಯುತ ಶಾಲೆ-ನಮ್ಮ ಬೇಡಿಕೆ
ಗ್ರಾಮೀಣ ಪ್ರದೇಶವಾಗಿರುವ ಕುಮಾರಮಂಗಲ ಶಾಲೆಯು 65 ವರ್ಷಗಳ ಇತಿಹಾಸವನ್ನು ಹೊಂದಿದ್ದು, ಇದೀಗ ಶಾಲೆಯು ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದ್ದು, ಈ ಶಾಲೆಯನ್ನು ವಸತಿಯುತ ಶಾಲೆಯಾಗಿ ಪರಿವರ್ತಿಸ ಬೇಕೆಂಬುದು ನಮ್ಮ ಬೇಡಿಕೆಯಾಗಿದ್ದು, ಜನಪ್ರತಿನಿಽಗಳು ಈ ಬಗ್ಗೆ ಗಮನ ಹರಿಸಬೇಕು
ಮಹೇಶ್ ಕೆ.ಸವಣೂರು
ಅಧ್ಯಕ್ಷರು, ಹಿರಿಯ ವಿದ್ಯಾರ್ಥಿ ಸಂಘ ಕುಮಾರಮಂಗಲ ಶಾಲೆ