ಬಡಗನ್ನೂರು: ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ಪಟ್ಟೆ ಮತ್ತು ಪ್ರತಿಭಾ ಪ್ರೌಢಶಾಲೆ ಪಟ್ಟೆ ಇದರ 2೦23 -2024 ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ದ್ವಿತೀಯ ದರ್ಜೆ ಸಹಾಯಕ ವಿಠಲ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭವು ಜ.7 ರಂದು ಪಟ್ಟೆ ವಿದ್ಯಾಸಂಸ್ಥೆಗಳ ಡಾ| ಬಾಲಕೃಷ್ಣ ಭಟ್ ರಂಗಮಂದಿರದಲ್ಲಿ ನಡೆಯಲಿದೆ.
ಪೂರ್ವಾಹ್ನ ಗಂ 9-30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವು ಪಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ .ವೇಣುಗೋಪಾಲ್ ಭಟ್ ಪಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಗಳ ಸಂಚಾಲಕ ನಾರಾಯಣ ಭಟ್ ಉದ್ಘಾಟನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಷಲತಾ ದೇವಕಜೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್. ವಿದ್ಯಾ ಸಂಸ್ಥೆಗಳ ನಿರ್ದೇಶಕ ಶಿವಪ್ರಸಾದ್ ಪಿ ,ನಹುಷ ಪಿ ವಿ ಶಿರೀಷ್ ಪಿ ಬಿ ಪುತ್ತೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಶಶಿಧರ ಎಂ. ಪ್ರತಿಭಾ ಪ್ರೌಢಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ, ಶ್ರೀಕೃಷ್ಣ ಹಿ.ಪ್ರಾ.ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಕೇಶವ ಪ್ರಸಾದ್ ನೀಲಗಿರಿ ಭಾಗವಹಿಸಲಿದ್ದಾರೆ.
ಬೀಳ್ಕೊಡುಗೆ
ಸಂಸ್ಥೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ನ.30 ರಂದು ನಿವೃತ್ತಿ ಹೊಂದಿರುವ ದ್ವಿತೀಯ ದರ್ಜೆ ಸಹಾಯಕ ವಿಠಲ ಎಂ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಲಿದೆ.
ಅಪರಾಹ್ನ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ ಎಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಭಿನಂದನಾ ಕಾರ್ಯಕ್ರಮ
ಪ್ರತಿಭಾ ಪ್ರೌಢಶಾಲಾ ದೈ.ಶಿ.ಶಿಕ್ಷಕ ಮೋನಪ್ಪ ಎಂ., ರಾಷ್ಟ್ರಮಟ್ಟದ ಕ್ರೀಡಾಪಟು ತನುಶ್ರೀ ರೈ ,ಹಾಗೂ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.