ಪುತ್ತೂರು : ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಇವರು ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘಕ್ಕೆ ಜ. 4 ರಂದು ರೂ 1 ಲಕ್ಷದ ಚೆಕ್ಕನ್ನು ನೀಡಿ ಸಮಾಜಮುಖಿ ಕೆಲಸ ಕಾರ್ಯ ನಿರ್ವಹಿಸುವಂತೆ ಹೇಳಿ ಶುಭ ಹಾರೈಸಿದರು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ,ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪುತ್ತೂರು ಯುವ ಬಂಟರ ಅಧ್ಯಕ್ಷ ಹರ್ಷ ಕುಮಾರ್ ರೈ, ಕಾರ್ಯದರ್ಶಿ ಪ್ರಜ್ವಲ್ ರೈ ಸೊರಕೆ, ಪುತ್ತೂರು ಬಂಟರ ಸಂಘದ ಮಾಜಿ ಕಾರ್ಯದರ್ಶಿ ಮೋಹನ ರೈ ನರಿಮೊಗರು, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ ರೈ, ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ ಶೆಟ್ಟಿ ಉಪಸ್ಥಿತರಿದ್ದರು.