ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ),ಯಾದಗಿರಿ ಇದರ ಆಶ್ರಯದಲ್ಲಿ ಜ.5 ಮತ್ತು 6 ರಂದು ಯಾದಗಿರಿಯಲ್ಲಿ ನಡೆದ ‘ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟ 2024-25’ ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಅಂಜನ್ ಗೌಡ ಜಿ.ಬಿ ಇವರು ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರು ಸೋಮವಾರಪೇಟೆ ನಿವಾಸಿ ಜಿ.ಸಿ. ಬಿದ್ದಪ್ಪ ಹಾಗೂ ಮನು ದಂಪತಿಗಳ ಪುತ್ರ. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.