ನೆಟ್ಟಣಿಗೆ ಮುಡ್ನೂರು ಗ್ರಾ.ಪಂ.ನಲ್ಲಿ ಟೈಲರಿಂಗ್ ತರಬೇತಿ ಉದ್ಘಾಟನೆ

0

ಪುತ್ತೂರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಈಶ್ವರಮಂಗಲ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ನೆಟ್ಟಣಿಗೆ ಮುಡ್ನೂರು ಹಾಗೂ ಪಂಚಮಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ನೆಟ್ಟಣಿಗೆ ಮುಡ್ನೂರು ಇದರ ಜಂಟಿ ಆಶ್ರಯದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾ.ಪಂ.ನಲ್ಲಿ ನಡೆಯುವ ಎರಡು ತಿಂಗಳ ಹೊಲಿಗೆ ತರಬೇತಿ ಶಿಬಿರ ಉದ್ಘಾಟಿಸಿದರು.


ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನೆಟ್ಟಣಿಗೆ ಮುಡ್ನೂರು ಗ್ರಾ.ಪಂ.ಅಧ್ಯಕ್ಷೆ ಫೌಝಿಯಾ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ಆಫ್ ಬರೋಡ ಈಶ್ವರ ಮಂಗಲ ಶಾಖಾ ವ್ಯವಸ್ಥಾಪಕ ಗೋಪಾಲಕೃಷ್ಣರವರು ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿದರು. ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯರವರು ಸ್ವ-ಉದ್ಯೋಗದ ನಿಯಮಗಳು, ಸ್ವ-ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಗಳು ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಪುತ್ತೂರು ತಾ.ಪಂ.ನ ತಾಲೂಕು ಅಭಿಯಾನ ನಿರ್ವಹಣಾ ಘಟಕದ ವ್ಯವಸ್ಥಾಪಕರಾದ ಜಗತ್ ಕೆ., ಮಾತನಾಡಿ, ಟೈಲರಿಂಗ್ ತರಬೇತಿ ಪಡೆದು ಉತ್ತಮ ಉದ್ಯಮ ಘಟಕ ಆರಂಭಿಸುವಂತೆ ಹೇಳಿದರು.

ನೆಟ್ಟಣಿಗೆ ಮುಡ್ನೂರು ಗ್ರಾ.ಪಂ.ಪಿಡಿಒ ವಿದ್ಯಾದರ್, ಉಪಾಧ್ಯಕ್ಷ ರಾಮ ಮೇನಾಲ, ಪಂಚಮಿ ಸಂಜೀವಿನಿ ಗ್ರಾ.ಪಂ.ಮಟ್ಟದ ಒಕ್ಕೂಟದ ಅಧ್ಯಕ್ಷೆ ವೀಣಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಅಭಿಯಾನ ನಿರ್ವಹಣೆ ಘಟಕದ ಕೃಷಿಯೇತರ ಚಟುವಟಿಕೆ ತಾಲೂಕು ವ್ಯವಸ್ಥಾಪಕಿ ನಳಿನಾಕ್ಷಿ ನಿರೂಪಿಸಿದರು. ವಂದಿತಾ ಸ್ವಾಗತಿಸಿ, ರೇವತಿ ವಂದಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ.ಸದಸ್ಯರು, ಪಂಚಮಿ ಸಂಜೀವಿನಿ ಗ್ರಾ.ಪಂ.ಮಟ್ಟದ ಒಕ್ಕೂಟದ ಸದಸ್ಯರು, ವಲಯ ಮೇಲ್ವಿಚಾರಕಿ ಸುವಿನಾ ಪಿ.ಕೆ., ಸಂಜೀವಿನಿ ಸದಸ್ಯರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here