ಕೆಯ್ಯೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರಿನಲ್ಲಿ ನವಂಬರ್ ತಿಂಗಳಲ್ಲಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಕೆ.ಪಿ.ಎಸ್ .ಕೆಯ್ಯೂರು ಪ್ರೌಢಶಾಲಾ ವಿಭಾಗದಿಂದ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 100 ಫಲಿತಾಂಶ ದಾಖಲಿಸಿದೆ.
ಲೋವರ್ ಗ್ರೇಡ್ ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳಲ್ಲಿ ಸಿಂಧೂರ ಎಸ್. ಪೂಜಾಶ್ರೀ .ಡಿ ,ದಿಶಾ ಎಂ .ಡಿ. ಇವರು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ 7 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಪ್ರಥಮ ಹಾಗೂ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ. ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 14 ವಿದ್ಯಾರ್ಥಿಗಳಲ್ಲಿ ತೇಜಸ್ ಪಿ.ಎಂ. ಹಾಗೂ ರೋಯಲ್ ಡಿಸೋಜಾ ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ 12 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಪ್ರಥಮ ಹಾಗೂ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕರಾದ ಪ್ರಕಾಶ್ ಎನ್. ಇವರು ತರಬೇತಿ ನೀಡಿದ್ದರು. ಡ್ರಾಯಿಂಗ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಉಪ ಪ್ರಾಂಶುಪಾಲರಾದ ವಿನೋದ್ ಕುಮಾರ್ ಕೆ. ಎಸ್. ಅಭಿನಂದಿಸಿದ್ದಾರೆ.