ನಗರಸಭೆ ಪಾರ್ಕ್ ನಿರ್ವಹಣೆಗೆ ಮಹಿಳಾ ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ

0


ಪುತ್ತೂರು: ಕೇಂದ್ರ ಪುರಸ್ಕೃತ ಅಮೃತ್ 2.0 ಅಭಿಯಾನದ ’ಅಮೃತ ಮಿತ್ರ’ ಕಾರ್ಯಕ್ರಮದಡಿ ತಾಂತ್ರಿಕ ಮತ್ತು ತಾಂತ್ರಿಕೇತರ ಚಟುವಟಿಕೆಯಡಿ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ನಗರಸಭೆಗೆ ಸಂಬಂಧಿಸಿದ ಪಾರ್ಕ್ ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ಪಂಚಸೂತ್ರ ಅನ್ವಯಿಸುತ್ತಿರುವ ಪುತ್ತೂರು ನಗರಸಭೆ ವ್ಯಾಪ್ತಿಯ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅಮೃತ್ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು, ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯ ಮುಖ್ಯ ಉದ್ದೇಶ ನಗರ ಪ್ರದೇಶದ ಪಾರ್ಕ್‌ಗಳನ್ನು ನಿರ್ವಹಣೆ ಮಾಡುವುದು. ಅಮೃತ್ ನಗರಗಳಲ್ಲಿ ಶೇ 100 ರಷ್ಟು ನಿರ್ವಹಣೆಯನ್ನು ಖಚಿತ ಪಡಿಸುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮಹಿಳಾ ಸ್ವ ಸಹಾಯ ಸಂಘಗಳು ನಗರಸಭೆಯ ಕಾರ್ಯಾಲಯದಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ಜ.10ರೊಳಗೆ ತಮ್ಮ ಪ್ರಸ್ತಾವನೆಯನ್ನು ಸೂಕ್ತ ದಾಖಲೆಗಳೊಂದಿಗೆ ಪುತ್ತೂರು ನಗರಸಭೆಗೆ ಅರ್ಜಿ ಸಲ್ಲಿಸುವುದು ಹೆಚ್ಚಿನ ವಿವರಗಳನ್ನು ಪುತ್ತೂರು ನಗರಸಭೆಯ ಡೇ ನಲ್ಮ್ ವಿಭಾಗವನ್ನು ಸಂಪರ್ಕಿಸುವಂತೆ ನಗರಸಭೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here