ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ನ 2024-25ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ ಕೇಂದ್ರದ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.
ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕಿ ಸೌಮ್ಯ ಮಾಹಿತಿ ನೀಡಿ ಉದ್ಯೋಗ ಖಾತರಿ ಯೋಜನೆಯ ಉದ್ಧೇಶ ಹಾಗೂ ಅರಿವು ತಿಳಿಸಿದರು. ತೋಟಗಾರಿಕಾ ಇಲಾಖೆಯ ಇಂಜಿನಿಯರ್ ಆಕಾಂಕ್ಷ ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಲಾದ ನರೇಗಾ ಕಾಮಗಾರಿಗಳ ಪರಿಶೀಲನೆ ಹಾಗೂ ವರದಿ ಮಂಡಿಸಲಾಯಿತು.
15ನೇ ಹಣಕಾಸು ಅನುದಾನದ ಕ್ರಿಯಾಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಯಿತು. ಉದ್ಯೋಗ ಖಾತರಿ ಯೋಜನೆಯ ಸಂಪನ್ಮೂಲ ವ್ಯಕ್ತಿಗಳಾದ ರಮೇಶ್, ಚಂಚಲ, ರೋಹಿಣಿ, ವಿದ್ಯಾ, ಕೃತಿಕಾರವರು ವಿವಿಧ ವಿವರ, ಮಾಹಿತಿ ತಿಳಿಸಿದರು. ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಆಶಾ ಸ್ವಾಗತಿಸಿ ವಂದಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೈಮುನತ್ತುಲ್ ಮೆಹ್ರಾ, ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಅಬೂಬಕ್ಕರ್, ಸುಭಾಷ್ ಸಿ., ಸುಲೋಚನ ವೇದಿಕೆಯಲ್ಲಿ ಉಪಸ್ಥಿತರಿದ್ದರು.