ಬಡಗನ್ನೂರು: ವಿದ್ಯಾಮಾತಾ ಅಕಾಡೆಮಿ ಪುತ್ತೂರು ಮತ್ತು ಜೆ ಸಿ ಐ ಪುತ್ತೂರು ಹಾಗೂ ಸಂತ ಫಿಲೋಮಿನ ಕಾಲೇಜು ಪುತ್ತೂರು ಇವರುಗಳ ಸಹಾಯಯೋಗದಲ್ಲಿ ʼನಾನು ಮತ್ತು ನನ್ನ ಕನಸುʼ ಎಂಬ ಶೀರ್ಷಿಕೆಯ ಅಡಿಯಲ್ಲಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ತಳು ತಮ್ಮನ್ನು ತಾವು ಯಾವ ರೀತಿಯಲ್ಲಿ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ಅರಿವು ಕಾರ್ಯಕ್ರಮ ಜ.8 ರಂದು ಪಾಪೆಮಜಲು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ವಿದ್ಯಾಮಾಥಾ ಅಕಾಡೆಮಿ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ರವರು ಭಾಗವಹಿಸಿ ವಿದ್ಯಾರ್ಥಿಗಳು ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮನ್ನು ತಾವು ಯಾವ ರೀತಿಯಲ್ಲಿ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ಅರಿವು ಮೂಡಿಸಿದರು.
ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಪುತ್ತೂರು ಸಂತ ಫಿಲೋಮಿನ ಕಾಲೇಜಿನ ಉಪನ್ಯಾಸಕ ಶೀತಲ್ ಕುಮಾರ್ ,ಪಾಪೆಮಜಲು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ, ಶಾಲಾ ಶಿಕ್ಷಕ ವೃಂದದವರು,ಮತ್ತು ಮಕ್ಕಳು ಉಪಸ್ಥಿತರಿದ್ದರು.