ಪಲ್ಲತ್ತಾರು ಶ್ರೀ ಮಲೆ ಉಳ್ಳಾಕುಲು ದೈವಸ್ಥಾನದಲ್ಲಿ ವಿಜೃಂಭಣೆಯ ವಾರ್ಷಿಕ ಉತ್ಸವ

0

ಪುತ್ತೂರು: ಒಳಮೊಗ್ರು ಗ್ರಾಮದ ಪಲ್ಲತ್ತಾರು ಶ್ರೀ ಮಲೆ ಉಳ್ಳಾಕುಲು ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಉತ್ಸವವು ಜ.9 ರಂದು ವಿಜೃಂಭಣೆಯಿಂದ ನಡೆಯಿತು.

ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನಿರ್ದೇಶನದಂತೆ ಕ್ಷೇತ್ರ ಪುರೋಹಿತರಾದ ವೇದಮೂರ್ತಿ ದಿನೇಶ ಮರಡಿತ್ತಾಯ ಗುಮ್ಮಟೆಗದ್ದೆಯವರ ನೇತೃತ್ವದಲ್ಲಿ ಬೆಳಿಗ್ಗೆ ಗಣಪತಿ ಹೋಮ ನಡೆದು ಬಳಿಕ ಪಲ್ಲತ್ತಾರು ಶ್ರೀ ಮಲೆ ಉಳ್ಳಾಕುಲು, ಧೂಮಾವತಿ, ಪಿಲಿ ಚಾಮುಂಡಿ ದೈವ ಮತ್ತು ನಾಗ ದೇವರಿಗೆ ತಂಬಿಲ ಸೇವೆ ನಡೆದು ಮಧ್ಯಾಹ್ನ ಪ್ರಾರ್ಥನೆ, ಮಹಾಪೂಜೆ, ಮಂಗಳಾರತಿ ನಡೆದು ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಪ್ರಸಾದ ವಿತರಣೆಯ ಬಳಿಕ ಅನ್ನಪ್ರಸಾದ ವಿತರಣೆ ನಡೆಯಿತು. ಊರ ಪರವೂರ ನೂರಾರು ಭಕ್ತಾಧಿಗಳು ಆಗಮಿಸಿ ಶ್ರೀ ದೈವಗಳ ಗಂಧಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸಿದರು. ಆಡಳಿತ ಮಂಡಳಿ ಗೌರವಾಧ್ಯಕ್ಷರು, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.


ಇಂದು ಸಂಜೆ ತಂಬಿಲ ಸೇವೆ
ಸಂಜೆ ಶ್ರೀ ಗುಳಿಗ, ಬೈರವ ದೈವಗಳಿಗೆ ತಂಬಿಲ ಸೇವೆ ನಡೆದು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here