ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ರಫೀಕ್ ಹುದವಿ ಕೋಲಾರಿ ಕುಂಬ್ರಕ್ಕೆ
ಪುತ್ತೂರು: ಎಸ್ಕೆಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲೆ ಆಶ್ರಯದಲ್ಲಿ ಬೃಹತ್ ಮಾನವ ಸರಪಳಿ ಜ.26ರಂದು ಕುಂಬ್ರದಲ್ಲಿ ನಡೆಯಲಿದ್ದು ಆ ಪ್ರಯುಕ್ತ ಕಾರ್ಯಕ್ರಮದ ಸ್ವಾಗತ ಸಮಿತಿಯ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಜ.10ರಂದು ಕುಂಬ್ರದಲ್ಲಿ ನಡೆಯಲಿದೆ.
ಎಸ್ಕೆಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ ರಫೀಕ್ ಹುದವಿ ಕೋಲಾರಿ ಕಚೇರಿಯನ್ನು ಉದ್ಘಾಟಿಸಲಿದ್ದು ಎಸ್ಕೆಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾಧ್ಯಕ್ಷರಾದ ಮುಹಮ್ಮದ್ ನವಮಿ ಮುಂಡೋಳೆ ಅಧ್ಯಕ್ಷತೆ ವಹಿಸಲಿದ್ದಾರೆ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಮಹಮ್ಮದ್ ಕೆ.ಎಚ್ ತಿಳಿಸಿದ್ದಾರೆ.