ಪುತ್ತೂರು: ಮಹಾರಾಷ್ಟ್ರದ ಪುಣೆಯ ಕಾತ್ರಜ್ ನಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಕಲರ್ಸ್ ಕನ್ನಡ ಖ್ಯಾತಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಗಾಯಕ ಪುತ್ತೂರು ಜಗದೀಶ್ ಆಚಾರ್ಯ ಬಳಗದಿಂದ ಜ.11 ರಂದು ಮದ್ಯಾಹ್ನ 2 ರಿಂದ ನಿರಂತರ 3 ಗಂಟೆಗಳ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತಿಗಾನಾಮೃತ ಕಾರ್ಯಕ್ರಮ ನಡೆಯಲಿದೆ. ಸಂಗೀತಾಭಿಮಾನಿಗಳೆಲ್ಲ ಅಗಮಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.