ರಾಮಕುಂಜ: ರಾಮಕುಂಜ ಗ್ರಾಮ ಪಂಚಾಯತ್ನ 2024-25ನೇ ಸಾಲಿನ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆಯು ಜ.9ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಅಧ್ಯಕ್ಷತೆ ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿಯಾಗಿದ್ದ ಪೆರಾಬೆ ಗ್ರಾ.ಪಂ.ನ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತ ಮುತ್ತಪ್ಪ ಗೌಡರವರು ವಿಕಲಚೇತನ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಅಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್ರವರು ಗ್ರಾಮ ಪಂಚಾಯತ್ನಿಂದ ನೀಡಲಾಗುವ ಶೇ.5ರ ಅನುದಾನದ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಬ್ಯಾಂಕ್ನ ಮೇನೇಜರ್ ರಾಜೇಶ್ ಕುಮಾರ್ ಅವರು ಬ್ಯಾಂಕ್ ಖಾತೆಯ ಬಗ್ಗೆ ವಿವರಗಳನ್ನು ನೀಡಿದರು. ಗ್ರಾ.ಪಂ.ಉಪಾಧ್ಯಕ್ಷ ಕೇಶವ ಗಾಂಧಿಪೇಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಕಾರ್ಯದರ್ಶಿ ಲಲಿತಾ ಸ್ವಾಗತಿಸಿ, ನಿರೂಪಿಸಿದರು.