ನೆಲ್ಯಾಡಿ ವಲಯ ಶೌರ್ಯ ಘಟಕದ ಸ್ವಯಂಸೇವಕರಿಂದ ಸ್ವಚ್ಛತೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಶೌರ್ಯ ಘಟಕದ ಸ್ವಯಂ ಸೇವಕರು ಕೌಕ್ರಾಡಿ ಕಟ್ಟೆಮಜಲು ಧೂಮಾವತಿ ದೈವಸ್ಥಾನದ ಆವರಣದ ಸುತ್ತಮುತ್ತ ಸ್ವಚ್ಛತೆ ಹಾಗೂ ಹುಲ್ಲುಕತ್ತರಿಸುವ ಯಂತ್ರಗಳ ಮೂಲಕ ಹುಲ್ಲುಗಳನ್ನು ತೆರವುಗೊಳಿಸಿದರು.


ಶ್ರಮದಾನದ ನಂತರ ಮಾಸಿಕ ಸಭೆಯು ಶೌರ್ಯ ವಿಪತ್ತು ನಿರ್ವಹಣಾ ಘಟಕ ನೆಲ್ಯಾಡಿ ವಲಯದ ಪ್ರತಿನಿಧಿ ರಮೇಶ್ ಬಾಣಜಾಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಯೋಜನಾಧಿಕಾರಿ ಮೇದಪ್ಪ ಗೌಡ ಎನ್.,ರವರು ಶೌರ್ಯ ಘಟಕದ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು.

ಕಟ್ಟೆಮಜಲು ಧೂಮಾವತಿ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸದಾನಂದ ಗೌಡ ಕುಂಡಡ್ಕ, ಹಿರಿಯರಾದ ದಿನಕರ ರಾವ್, ಸಮಿತಿ ಪದಾಧಿಕಾರಿ ಶಶಿಧರ್ ಶೆಟ್ಟಿ ಪರಂತಮೂಲೆ, ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ., ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶೌರ್ಯ ಘಟಕದ ಸ್ವಯಂ ಸೇವಕರು ಸಭೆಯಲ್ಲಿ ಭಾಗವಹಿಸಿದ್ದರು. ಶೌರ್ಯ ಘಟಕ ಸಂಯೋಜಕಿ ನಮಿತಾ ಎಸ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಕಟ್ಟೆಮಜಲು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಸುಮನಾ ವಂದಿಸಿದರು.

LEAVE A REPLY

Please enter your comment!
Please enter your name here