ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ: ಮಣಿಕ್ಕರ ಶಾಲಾ ಮುಖ್ಯ ಶಿಕ್ಷಕಿಗೆ ಇಲಾಖೆಯಿಂದ ನೊಟೀಸ್

0

ಪುತ್ತೂರು: ಸರಕಾರಿ ಶಾಲಾ ನೂತನ ಕೊಠಡಿ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಲ್ಲಿ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿ ಪ್ರಾ ಶಾಲೆಯ ಮುಖ್ಯ ಶಿಕ್ಷಕಿಗೆ ಶಿಕ್ಷಣ ಇಲಾಖೆಯಿಂದ ನೊಟೀಸ್ ಜಾರಿ ಮಾಡಲಾಗಿದೆ.


ಜ.7 ರಂದು ಸಂಜೆ ಮಣಿಕ್ಕರ ಸರಕಾರಿ ಹಿ ಪ್ರಾ ಶಾಲೆಯಲ್ಲಿ ನೂತನ ಕೊಠಡಿ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನೂತನ ಕಟ್ಟಡವನ್ನು ಉದ್ಘಾಟನೆ ಮಾಡುವ ವೇಳೆ ಶಿಕ್ಷಕಿ ಸರಕಾರಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದು ಮಾತ್ರವಲ್ಲದೆ ಶಿಷ್ಟಾಚಾರ ವ್ಯಾಪ್ತಿಗೆ ಒಳಪಡದ ವ್ಯಕ್ತಿಯಿಂದ ಉದ್ಘಾಟನೆ ಮಾಡಿಸಿದ್ದರು.

ಶಾಸಕರು ಉದ್ಘಾಟನೆಗೆ ತೆರಳುವ ವೇಳೆ ಕಾರ್ಯಕ್ರಮ ಮುಗಿದಿತ್ತು. ಈ ವಿಚಾರವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳಲ್ಲಿ ಪ್ರಶ್ನಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಶಿಕ್ಷಣ ಇಲಾಖೆಯಿಂದ ಮುಖ್ಯ ಶಿಕ್ಷಕಿಗೆ ನೊಟೀಸ್ ಜಾರಿ ಮಾಡಲಾಗಿದ್ದು ಕಚೇರಿಗೆ ಖುದ್ದು ಹಾಜರಾಗಿ ವರದಿ ನೀಡುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here