ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಶಾಲಾ ಸಂಸತ್ತಿನ ಚಳಿಗಾಲದ ಅಧಿವೇಶನ

0

ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ದ್ವಿತೀಯ ಅಧಿವೇಶನವು ಜನವರಿ 10 ರಂದು ಇಂದ್ರಪ್ರಭಾ ಆಡಿಟೋರಿಯಂ ನಲ್ಲಿ ನಡೆಯಿತು.

ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೂಡಿಸುವ ನಿಟ್ಟಿನಲ್ಲಿ ಮಹತ್ವವಾದ ಕಾರ್ಯಕ್ರಮ ಇದಾಗಿದ್ದು, ವಿದ್ಯಾರ್ಥಿಗಳು ಸಕ್ರಿಯರಾಗಿ ಭಾಗವಹಿಸಿದ್ದರು.
ಕ್ರೀಡಾ ಮಂತ್ರಿಯಾಗಿ ಆಯ್ಕೆಯಾಗಿರುವ ಹತ್ತನೇ ತರಗತಿಯ ಮೋಹಿತ್ ಡಿ ಗೌಡ, ವಾರ್ಷಿಕ ಪರೀಕ್ಷೆ ಮುಗಿದ ನಂತರ 10 ದಿನಗಳ ಕ್ರೀಡಾ ಚಟುವಟಿಕೆಯನ್ನು ಆಯೋಜಿಸುವ ಕುರಿತು ಪ್ರಣಾಳಿಕೆಯನ್ನು ಮಂಡಿಸಿದರು.

ಆಡಳಿತ ಮತ್ತು ವಿರೋಧ ಪಕ್ಷದವರ ನಡುವೆ ಈ ವಿಚಾರವಾಗಿ ಸುದೀರ್ಘ ಚರ್ಚೆ ನಡೆದು ಅಂತಿಮವಾಗಿ ಸರ್ವಾನುಮತದಿಂದ ಅಂಗೀಕಾರಗೊಂಡಿತು. ವಿರೋಧ ಪಕ್ಷದ ಸದಸ್ಯರು ಆಡಳಿತ ಪಕ್ಷದ ಕುಂದು ಕೊರತೆಗಳನ್ನು ಪ್ರಶ್ನಿಸುವುದರ ಮೂಲಕ ಆಡಳಿತ ಪಕ್ಷದ ಗಮನ ಸೆಳೆದರು. 10ನೇ ತರಗತಿಯ ಜಿಯಾನ್ ಮರಿಯಾ ಸಿಕ್ವೇರಾ ಹಾಗೂ 9ನೇ ತರಗತಿಯ ಪಿ ಸಂಜನ್ ರಾವ್ ಇವರ ಸಭಾಧ್ಯಕ್ಷತೆಯಲ್ಲಿ ಅಧಿವೇಶನವು ಯಶಸ್ವಿಯಾಗಿ ನಡೆಯಿತು. ನಂತರ ಮಾತನಾಡಿದ ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕಿ ಶಶಿಕಲಾ ಸಂಸ್ಥೆಯ ಶಿಸ್ತನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಜವಬ್ದಾರಿಯನ್ನು ಅರಿತು ಅದರಂತೆ ನಡೆದುಕೊಳ್ಳಬೇಕು. ಅಂಗೀಕಾರಗೊಂಡ ಪ್ರಣಾಳಿಕೆಯನ್ನು ಯಶಸ್ವಿಗೊಳಿಸಲು ಸೂಕ್ತ ಮಾರ್ಗಸೂಚಿಯನ್ನು ಸಿದ್ದಗೊಳಿಸುವಂತೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here