ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಮಖೆ ಜಾತ್ರೆ ಪ್ರಯುಕ್ತ ಚರ್ಚಿಸಲು ಜ.14ರಂದು ಭಕ್ತಾದಿಗಳ ಸಭೆಯನ್ನು ದೇವಾಲಯದ ವಠಾರದಲ್ಲಿ ಕರೆಯಲಾಗಿದೆ.
ಬೆಳಗ್ಗೆ 11 ಗಂಟೆಗೆ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ದೇವಾಲಯದ ಭಕ್ತಾದಿಗಳು ಭಾಗವಹಿಸಿ ಸೂಕ್ತ ಸಲಹೆ- ಸೂಚನೆಗಳನ್ನು ನೀಡಬೇಕೆಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ರಾಧಾಕೃಷ್ಣ ನಾೖಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.