ಪುತ್ತೂರು: 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಶಾಸ್ತ್ರೀಯ ನೃತ್ಯದ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಪುತ್ತೂರಿನ ಶ್ರೀದೇವಿ ಕೋಟೆ ಶೇ.82 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ನೃತ್ಯೋಪಾಸನಾ ಕಲಾ ಅಕಾಡೆಮಿ ಪುತ್ತೂರು ಇದರ ನೃತ್ಯ ಗುರುಗಳಾದ ವಿದುಷಿ ಶಾಲಿನಿ ಆತ್ಮಭೂಷಣ್ ಇವರಿಂದ ಕಳೆದ 15 ವರ್ಷಗಳಿಂದ ಭರತನಾಟ್ಯ ತರಬೇತಿಯನ್ನು ಪಡೆದಿರುತ್ತಾರೆ. ಶ್ರೀದೇವಿ ಪುತ್ತೂರಿನ ಪರ್ಲಡ್ಕ ನಿವಾಸಿ ಸತ್ಯನಾರಾಯಣ ಕೋಟೆ ಹಾಗೂ ಶಾಂತಾ ಕೋಟೆ ದಂಪತಿಯ ಪುತ್ರಿ.