ನೆಲ್ಯಾಡಿ: ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಾಂಚನ ಮತ್ತು ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ ಕಾಂಚನ ಇವುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ಶಾಲಾ ಸಭಾಂಗಣದಲ್ಲಿ ನಡೆಯಿತು.
ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಗೌಡ ನೆಕ್ಕರಾಜೆ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಮಧುಶ್ರೀ ಯಾದವ ಗೌಡ ನೆಕ್ಕರೆ ದೀಪ ಪ್ರಜ್ವಲಿಸಿದರು. ಸಂಸ್ಥೆಯ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಜೈನ್‌ರವರು ಎರಡು ಶಾಲೆಗಳ ಸುಜ್ಞಾನ ಮತ್ತು ಚಿಗುರು ಎಂಬ ಹೆಸರಿನ ಹೊತ್ತಗೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.
ಸನ್ಮಾನ:
ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಮಿಂಚಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಲಾಯಿತು. ಯಕ್ಷಗಾನ ಹಾಗೂ ನೃತ್ಯ ತರಬೇತಿ ನೀಡಿದ ಅರುಣ್‌ಕುಮಾರ್, ಪೂಜಾ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಳೆದ 7 ವರ್ಷಗಳಿಂದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಸುಪ್ರೀತಾ ಕುಳ್ಳಾಜೆ ಅವರನ್ನು ಸನ್ಮಾನಿಸಲಾಯಿತು.
ಪ್ರಾಥಮಿಕ ಶಾಲಾ ಮುಖ್ಯಗುರು ಎ.ಲಕ್ಷ್ಮಣ ಗೌಡ ಸ್ವಾಗತಿಸಿದರು. ಶಿಕ್ಷಕಿ ರಮ್ಯಶ್ರೀ ವಂದಿಸಿದರು. ಶಿಕ್ಷಕಿಯರಾದ ವಂದನಾ ಎಂ.ಎಸ್., ಮಹಾಲಕ್ಷ್ಮೀ ಜೆ.ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತುಳುನಾಡ ವೈಭವ, ಸುದರ್ಶನ ವಿಜಯ ಯಕ್ಷಗಾನವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ವಿದ್ಯಾರ್ಥಿಗಳಿಂದಲೇ ಸಾಂಸ್ಕೃತಿಕ ಕಾರ್ಯಕ್ರಮವು ನಿರೂಪಿಸಲ್ಪಟ್ಟಿತ್ತು.