ನೆಟ್ಟಣಿಗೆ ಮುಡ್ನೂರು ಸರ್ಕಾರಿ ಪ್ರೌಢಶಾಲೆಯ ನೂತನ ಶೌಚಾಲಯ ನಿರ್ಮಾಣಕ್ಕೆ ಶಿಲನ್ಯಾಸ

0

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ನ ನರೇಗಾ ಯೋಜನೆ ಮತ್ತು ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಸುಮಾರು 5,20,000ಲಕ್ಷ. ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೆಟ್ಟಣಿಗೆ ಮುಡ್ನೂರು ಸರಕಾರಿ ಪ್ರೌಢಶಾಲೆಯ ನೂತನ ಶೌಚಾಲಯದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಫೌಝಿಯಾ ಇಬ್ರಾಹಿಂ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿನಿಂದ ಗ್ರಾಮ ನೈರ್ಮಲ್ಯಕ್ಕೆ ವಿಶೇಷ ಕಾಳಜಿಯನ್ನು ವಹಿಸುತ್ತಿದ್ದು ಶೌಚಾಲಯ ನಿರ್ಮಾಣಕ್ಕೆ ವಿಶೇಷ ಆದ್ಯತೆಯನ್ನು ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಮ ಮೇನಾಲ, ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಪ್ಪ ನಾಯ್ಕ, ಇಬ್ರಾಹಿಂ ಪಳ್ಳತ್ತೂರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಸೂಫಿ ಬಾಂಟಡ್ಕ , ಶಿಕ್ಷಣ ತಜ್ಞರಾದ ಸದಾಶಿವ ರೈ ನಡುಬೈಲ್, ಶ್ರೀಮಹಾಬಲ ರೈ ಕರ್ನೂರು, ಮೊಹಮ್ಮದ್ ಪಳ್ಳತ್ತೂರು, ಶಶಿಕಲಾ ಮಾದವ ಗೌಡ. ಅಬ್ದುಲ್ ಖಾದರ್ ಗೋಲಿದಡಿ, ಕಾಮಗಾರಿಯ ಗುತ್ತಿಗೆದಾರ ಅಜೀಜ್ ಓಣಿಯಾಡ್ಕ ಉಪಸ್ಥಿತರಿದ್ದರು.

ಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಶ್ರೀರಾಮ್ ಪಕ್ಕಳ ಸ್ವಾಗತಿಸಿದರು. ಶಾಲಾ ಮುಖ್ಯ ಗುರು ಪ್ರೇಮ್ ಕುಮಾರ್ ವಂದಿಸಿದರು. ಶಿಕ್ಷಕರಾದ ಶ್ರೀ ದೇವಿ ಪ್ರಕಾಶ್ ಶೆಟ್ಟಿ,ಇಂದಿರಾ,
ದಮಯಂತಿ, ಮೋನಿಷಾ, ಮೋಹಿನಿ, ಮೀನಾಕ್ಷಿ, ಹೇಮಾವತಿ ಸಹಕರಿಸಿದರು. ಪುರುಷೋತ್ತಮ ಬಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here