ಪುತ್ತೂರು: ಎಪಿಎಂಸಿ ರಸ್ತೆಯಲ್ಲಿರುವ ಆದರ್ಶ ಆಸ್ಪತ್ರೆ ಎದುರು ನೂತನವಾಗಿ ನಿರ್ಮಾಣಗೊಂಡ ತ್ರಿನೇತ್ರ ಕಾಂಪ್ಲೆಕ್ಸ್ನ ಉದ್ಘಾಟನಾ ಸಮಾರಂಭ ಜ.14 ರಂದು ಪೂರ್ವಾಹ್ನ 10.30ಕ್ಕೆ ನಡೆಯಲಿದೆ.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಆದರ್ಶ ಆಸ್ಪತ್ರೆಯ ವೈದ್ಯ ಡಾ. ಪ್ರಸಾದ್ ಭಂಡಾರಿ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟನೆ ನೆರವೇರಿಸಲಿದ್ದಾರೆ.
ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ, ನಗರಸಭಾ ಉಪಾಧ್ಯಕ್ಷ ಬಾಲಚಂದ್ರ, ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಮುಳಿಯ ಜ್ಯುವೆಲ್ಲರ್ಸ್ನ ಮುಳಿಯ ಕೇಶವ ಪ್ರಸಾದ್, ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ನಗರಸಭೆ ಸದಸ್ಯ ರಮೇಶ್ ರೈ, ನಗರಸಭೆ ಮಾಜಿ ಸದಸ್ಯ ಮಹಮ್ಮದ್ ಅಲಿ, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ ಶಿವಾನಂದ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪಾಲುದಾರರಾದ ಕೆ.ಗಿರಿಧರ ಹೆಗ್ಡೆ, ಕೆ. ವೆಂಕಟೇಶ್ ಭಟ್ ಹಾಗೂ ಸೃಜನ್ ಊರುಬೈಲು ರವರು ತಿಳಿಸಿದ್ದಾರೆ.