ಪುತ್ತೂರು: ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿರುವ ರಾಮಜಾಲು ಶ್ರೀ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಬೈದೆರುಗಳ ವೈಭವದ ಜಾತ್ರೋತ್ಸವವು ಜ.18 ರಂದು ನಡೆಯಲಿದ್ದು ಇದರ ಅಂಗವಾಗಿ ಪರ್ಪುಂಜದ ಸ್ನೇಹ ಯುವಕ ಮಂಡಲ ಮತ್ತು ಸ್ನೇಹ ಮಹಿಳಾ ಮಂಡಲದ ಸದಸ್ಯರಿಂದ ಗರಡಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಟ್ಟರು.
ಶ್ರೀ ಬ್ರಹ್ಮಬೈದೆರ್ಕಳ ಗರಡಿ ನೇಮೋತ್ಸವವು ಪ್ರತಿವರ್ಷದಂತೆ ಈ ವರ್ಷವು ಅತ್ಯಂತ ವಿಜೃಂಭಣೆಯಿಂದ ಜರಗಲಿದೆ. ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ನೇಹ ಯುವಕ ಮಂಡಲ, ಮಹಿಳಾ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.