ಪುತ್ತೂರು: ಕರ್ನಾಟಕ ರಾಜ್ಯ ಡಾ|| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಇವರು ನಡೆಸಿದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಖುಷಿ ರೈ 500/366 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ.
ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಕಲ್ಚರ್ ಇದರ ಗುರು ಕರ್ನಾಟಕ ಕಲಾಶ್ರೀ ವಿದುಷಿ ನಯನ .ವಿ.ರೈ ಮತ್ತು ವಿದುಷಿ ಸ್ವಸ್ತಿಕ ಆರ್ ಶೆಟ್ಟಿ ಇವರ ಶಿಷ್ಯೆಯಾಗಿದ್ದಾರೆ. ಇವರು ದಂಬೆಕಾನ ರಾಜೇಂದ್ರ ಪ್ರಸಾದ್ ರೈ ಮತ್ತು ಸುಮಿತ ರೈ ಯವರ ಪುತ್ರಿ.