ಪುತ್ತೂರು: ಡಾ.ಗಂಗೂಬಾಯಿ ಹಾನಗಲ್ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಯ 6ನೇ ತರಗತಿಯ ವಿದ್ಯಾರ್ಥಿನಿ ಸುವಿಜ್ಞಾ ವಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.
ಶ್ರೀ ಕೃಷ್ಣ ಕಲಾ ಕೇಂದ್ರ ಭಕ್ತಕೋಡಿ ಶಾಖೆಯ ವಿದ್ವಾನ್ ಗೋಪಾಲಕೃಷ್ಣ ವೀರಮಂಗಲ ಇವರ ಶಿಷ್ಯೆಯಾಗಿರುವ ಸುವಿಜ್ಞಾ ವಿ ಅವರು ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ವಿನಯ ರೈ ಮತ್ತು ಶಿಕ್ಷಕಿ ಶ್ರುತಿ ಎ ದಂಪತಿಯ ಪುತ್ರಿ.