ಕಡಬ: ಠಾಣಾ ವ್ಯಾಪ್ತಿಯ ಕೊಯಿಲ ಬಳಿ ಅಕ್ರಮ ದನ ಸಾಗಾಟದ ವಾಹನವೊಂದನ್ನು ಪೊಲೀಸರು ತಡೆಹಿಡಿದಿದ್ದು, ವಾಹನ ಬಿಟ್ಟು ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಘಟನೆ ಜ.14 ಮುಂಜಾನೆ ನಡೆದಿದ್ದು, ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು ಎಂಟು ಜಾನುವಾರುಗಳಿದ್ದು, ಒಂದು ದನ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಲ್ಲದೆ ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು ಠಾಣೆಗೆ ಕೊಂಡೊಯ್ದಿದ್ದಾರೆ.