ಜ.18: ಪುತ್ತೂರಿನಲ್ಲಿ ರಾಜ್ಯ, ಜಿಲ್ಲಾ ಕ್ರೀಡಾ ಶಾಲೆ, ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

0

ಪುತ್ತೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ರಾಜ್ಯ, ಜಿಲ್ಲಾ ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಜ.18ರಂದು ಬೆಳಿಗ್ಗೆ 10 ಗಂಟೆಗೆ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.


ಕಿರಿಯರ ವಿಭಾಗ;
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2025-26ನೇ ಸಾಲಿಗೆ 5ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು. 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2025-26ನೇ ಸಾಲಿಗೆ 8ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು. ಎರಡೂ ವಿಭಾಗಗಳಿಗೂ 2025ರ ಜೂನ್ 1ಕ್ಕೆ 11 ವರ್ಷ ಒಳಗಿನವರಾಗಿರಬೇಕು. ತಾಲೂಕು ಮಟ್ಟದಲ್ಲಿ ಅರ್ಹತೆ ಪಡೆದು ರಾಜ್ಯ ಮಟ್ಟದ ಕ್ರೀಡಾ ಶಾಲೆ/ನಿಲಯಕ್ಕೆ ಆಯ್ಕೆ ಬಯಸುವವರು ಫೆ.10ರಂದು ಉಡುಪಿಯಲ್ಲಿ ನಡೆಯುವ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು.


ಹಿರಿಯರ ವಿಭಾಗ:
ಹಿರಿಯ ವಿಭಾಗದ ಕ್ರೀಡಾ ಶಾಲೆ/ ವಸತಿ ನಿಲಯಗಳಿಗೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2025-26ನೇ ಸಾಲಿಗೆ ಪ್ರಥಮ ಪಿ.ಯು.ಸಿ. ಗೆ ಪ್ರವೇಶ ಪಡೆಯಲು ಅರ್ಹತೆ ಪಡೆದಿರಬೇಕು. ವಯಸ್ಸು ಜೂ.1ಕ್ಕೆ 17 ವರ್ಷ ಒಳಗಿನವರಾಗಿರಬೇಕು. ಹಿರಿಯ ವಿಭಾಗಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು ಫೆ.10ರಂದು ಉಡುಪಿಯಲ್ಲಿ ನಡೆಯುವ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಬೇಕು.


ಭಾಗವಹಿಸುವ ವಿದ್ಯಾರ್ಥಿಗಳು ದೃಢೀಕೃತ ಜನನ ಪ್ರಮಾಣ ಪತ್ರದೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲ್ಲೂಕು ಕ್ರೀಡಾಂಗಣ ಕೊಂಬೆಟ್ಟು (9164502107) ಇವರನ್ನು ಸಂಪರ್ಕಿಸುವಂತೆ ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕ ಶ್ರೀಕಾಂತ್ ಬಿರಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here