ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 62ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ

0


ಪುತ್ತೂರು: ಸಾರ್ವಜನಿಕ ಶ್ರೀ ಸತ್ಯನಾರಾಯಣ ವ್ರತಾಚರಣಾ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರ ಪುತ್ತೂರು ಇದರ ನೇತೃತ್ವದಲ್ಲಿ 62ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆಯು ಜ.14ರಂದು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ಬೆಳಿಗ್ಗೆ ಕಲಶ ಪ್ರತಿಷ್ಟೆ, ಬಳಿಕ ವಜ್ರಮಾತಾ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಹಸ್ರ ಸಂಖ್ಯೆಯಲ್ಲಿ ಭಕ್ತರು ಪೂಜೆಯಲ್ಲಿ ಪಾಲ್ಗೊಂಡರು. ಸಮಿತಿ ಅಧ್ಯಕ್ಷ ಹೆಚ್ ಉದಯ ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here