ಪುತ್ತೂರು: ಜ.14ರಂದು ಮಕರ ಸಂಕ್ರಮಣ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ವಿಶೇಷ ಪೂಜೆ, ಅಭಿಷೇಕಾಧಿಗಳು ನಡೆಯಿತು.
ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, 11ರಿಂದ ವಿಶೇಷ ಅಭಿಷೇಕ ಹಾಗೂ ಮಹಾಪೂಜೆ ನಡೆಯಿತು.
ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ನಳಿನಿ ಪಿ ಶೆಟ್ಟಿ, ಮಹಾಬಲ ರೈ ವಳತ್ತಡ್ಕ, ಈಶ್ವರ ಬೇಡೆಕರ್, ಸುಭಾಷ್ ರೈ ಬೆಳ್ಳಿಪ್ಪಾಡಿ, ವಿನಯ ಸುವರ್ಣ, ಕೃಷ್ಣವೇಣಿ, ದಿನೇಶ್ ಪಿ.ವಿ ಮತ್ತು ಅಯ್ಯಪ್ಪ ಭಕ್ತ ವೃಂದದ ಮಾಧವ ಸ್ವಾಮಿ ಉಪಸ್ಥಿತರಿದ್ದರು. ದೇವಳದ ಅರ್ಚಕ ಹರೀಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು.