ಪುತ್ತೂರು: ಕರ್ನಾಟಕ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಅಕ್ಷರ ಕೆ.ಸಿರವರು ಶೇ.95% ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಅಕ್ಷರ ಪುತ್ತೂರಿನ ನಾಟ್ಯರಂಗ ನೃತ್ಯ ಕಲಾ ಶಾಲೆಯ ಗುರುಗಳಾದ ವಿ.ಮಂಜುಳಾ ಸುಬ್ರಹ್ಮಣ್ಯ ಅವರ ಶಿಷ್ಯೆಯಾಗಿದ್ದು, ಸುದಾನ ವಸತಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದಾರೆ. ಈಕೆ ಚಂದ್ರಶೇಖರ ಭಟ್ ಕೆ ಮತ್ತು ಸುದಾನ ವಸತಿಯುತ ಶಾಲೆಯ ಶಿಕ್ಷಕಿ ಕವಿತಾ ಅಡೂರು ಅವರ ಪುತ್ರಿ.