ರಾಮಕುಂಜ ಆ.ಮಾ.ಶಾಲೆಯಲ್ಲಿ ’ಏಣೇಲ್ ಬುಲೆತ ಚೀಪೆ ನೆಂಪು’

0

ರಾಮಕುಂಜ: ಭತ್ತದ ಕೃಷಿಯ ವಿವಿಧ ಹಂತಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ದೃಷ್ಟಿಯಿಂದ “ಏಣೇಲ್ ಬುಲೆತ ಚೀಪೆ ನೆಂಪು” ಎಂಬ ವಿಶೇಷ ಕಾರ್ಯಕ್ರಮ ಜ.13ರಂದು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಮಾತನಾಡಿ, ಭಾರತವು ವಿಶ್ವಗುರುವಾಗುವತ್ತ ನಡೆಯುವ ಸಂದರ್ಭದಲ್ಲಿ ನಮ್ಮ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ವಿದ್ಯಾರ್ಥಿಗಳೆಲ್ಲರೂ ನಮ್ಮ ಮನೆಯಲ್ಲಿಯೇ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು, ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸಬೇಕೆಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಬಿ.ಎಲ್.ಜನಾರ್ದನ್ ಆಲಂಕಾರುರವರು ಮಾತನಾಡಿ, ಭತ್ತದ ಕೃಷಿಯನ್ನು ತಮ್ಮ ಗದ್ದೆಯಲ್ಲಿ ನಾಟಿ ಮಾಡಲು ಸಂಸ್ಥೆಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುವುದರ ಜೊತೆಗೆ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು ಸಾವಯವ ಕೃಷಿಯ ಮಹತ್ವವನ್ನು ತಿಳಿಸಿಕೊಟ್ಟರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ.ಮಾತನಾಡಿ, ಪ್ರಾಯೋಗಿಕ ಕಲಿಕೆಯಿಂದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಹೇಳಿದರು.


ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್.ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯಗುರು ಲೋಹಿತಾ ಎ ವಂದಿಸಿದರು. ಸಹಶಿಕ್ಷಕ ವಸಂತ ಮೂಲ್ಯ ಕಾರ‍್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಸರಿತಾ ಜನಾರ್ದನ್ ಕಾರ್ಯಕ್ರಮ ಸಂಯೋಜಿಸಿದರು. ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನುಟ್ಟು, ಏಣೇಲ್ ಅಕ್ಕಿಯ ಊಟವನ್ನು ಸವಿದು ಸಂಭ್ರಮಿಸಿದರು.

LEAVE A REPLY

Please enter your comment!
Please enter your name here