ಶಾಂತಾ ಪುತ್ತೂರುರವರಿಗೆ ಗೌರವ ಡಾಕ್ಟರೇಟ್

0

ಪುತ್ತೂರು: ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯು ಶಿಕ್ಷಣ, ಸಾಹಿತ್ಯ, ಸಂಘಟನೆಗಾಗಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಶಾಂತಾ ಪುತ್ತೂರುರವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


ಶಾಂತಾ ಪುತ್ತೂರುರವರು ಮೂವತ್ತು ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳದ ತಾಲೂಕು ಸಂಘಟಕಿಯಾಗಿ ಗೈಡ್ಸ್ ಜೊತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕದ ಅಧ್ಯಕ್ಷೆ ಯಾಗಿ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ನ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆಯಾಗಿ, ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ಸಾಹಿತ್ಯ ಸೇವೆ ಸಲ್ಲಿಸುತ್ತಿದ್ದಾರೆ.ನಲಿಕಲಿ,ಯೋಗ ರಾಜ್ಯ ಸಂಪನ್ಮೂಲ ವ್ಯಕ್ತಿ ಯಾಗಿ ತರಬೇತಿ ನೀಡಿರುತ್ತಾರೆ. ಅನೇಕ ಸಾಹಿತ್ಯ ಕಮ್ಮಟ, ಕವಿಗೋಷ್ಠಿ ನಡೆಸಿರುತ್ತಾರೆ. ಇವರಿಗೆ ಬಹುಮುಖ ಪ್ರತಿಭೆ ನೆಲೆಯಲ್ಲಿ ಅನೇಕ ರಾಜ್ಯ ಪ್ರಶಸ್ತಿಗಳು ಲಭಿಸಿವೆ.


LEAVE A REPLY

Please enter your comment!
Please enter your name here