ಪುತ್ತೂರು: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ರಿಂದ ಜ.21 ರವರೆಗೆ ನಡೆಯಲಿದೆ. ಜ.19 ರಂದು ಬ್ರಹ್ಮರಥೋತ್ಸವ ಜರಗಲಿದೆ. ಜ.16 ರಂದು ಬೆಳಿಗ್ಗೆ ಗಂಟೆ 10ಕ್ಕೆ ಉಗ್ರಾಣ ಮುಹೂರ್ತ ನಡೆಯಲಿದೆ. ರಾತ್ರಿ ಗಂಟೆ 7ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ ನಡೆಯಲಿದೆ.
ಜ.17 ರಂದು ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಪೇಟೆ ಸವಾರಿ ನಡೆಯಲಿದೆ. ಜ.18 ರಂದು ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿದೆ. ರಾತ್ರಿ ಗಂಟೆ 7 ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ದೀಪೋತ್ಸವ, ಪಲ್ಲಕ್ಕಿ ಉತ್ಸವ, ವಸಂತ ಕಟ್ಟೆ ಪೂಜೆ, ನೃತ್ಯ ಬಲಿ ನಡೆಯಲಿದೆ.
ಜ.19 ರಂದು ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ದೇವರಿಗೆ ಕಲಶಾಭಿಷೇಕ, ಪಲ್ಲಕ್ಕಿ ಉತ್ಸವ ನಡೆಯಲಿದೆ. ರಾತ್ರಿ ಗಂಟೆ 7 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ, ಬ್ರಹ್ಮರಥೋತ್ಸವ,ಪೆರುವಾಜೆ ಬೆಡಿ ನಡೆಯಲಿದೆ. ಜ.20 ರಂದು ಬೆಳಿಗ್ಗೆ ಗಂಟೆ 7ಕ್ಕೆ ಕವಾಟೋದ್ಘಾಟನೆ ಇತರ ವೈದಿಕ ಕಾರ್ಯಕ್ರಮಗಳು, ರಾತ್ರಿ ಗಂಟೆ 7ಕ್ಕೆ ಶ್ರೀ ದೇವರ ಕಟ್ಟೆಪೂಜೆ ನಡೆಯಲಿದೆ.
ಜ.21 ರಂದು ಬೆಳಿಗ್ಗೆ ಗಂಟೆ 7 ರಿಂದ ಮಹಾಗಣಪತಿ ಹೋಮ, ಕಲಶಪೂಜೆ ನಡೆದ ಬಳಿಕ ಬೆಳಿಗ್ಗೆ ಗಂಟೆ 9 ರಿಂದ ದೈವಗಳ ನೇಮೋತ್ಸವ ನಡೆಯಲಿದೆ. ಎಂದು ದೇವಾಲಯದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ತಿಳಿಸಿದ್ದಾರೆ.
ಜ.18 ಯಕ್ಷಗಾನ ಬಯಲಾಟ
ಜ.18 ರಂದು ರಾತ್ರಿ ಪಾವಂಜೆ ಮೇಳದವರಿಂದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ “ಭಾರತವರ್ಷಿಣಿ” ನಡೆಯಲಿದೆ.